• July 25, 2024

ದೆಹಲಿ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ| ಡಿ ವೀರೇಂದ್ರ ಹೆಗ್ಗಡೆ

 ದೆಹಲಿ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ| ಡಿ ವೀರೇಂದ್ರ ಹೆಗ್ಗಡೆ

ದೆಹಲಿ: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಡೆಯವರು ಜುಲೈ 21ರಂದು ದೆಹಲಿಯ ಸಂಸತ್ ಭವನದಲ್ಲಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ತಮ್ಮ 20ನೇ ವಯಸ್ಸಿನಲ್ಲಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಶಿಕ್ಷಣ ಕ್ಷೇತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ಇವರು ಯುವಕರನ್ನು ಪ್ರೇರೇಪಿಸಿದ ಬಗೆ ಅಮೋಘ.

ಡಾ. ಡಿ ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ ಅಥೇಟ್ ಉಷಾ ಹಾಗೂ ಚಲನಚಿತ್ರ ಕಥೆಗಾರ ವಿ ವಿಜಯೇಂದ್ರ ಪ್ರಸಾದ್ ಅವರನ್ನ ಜುಲೈ 6 ರಂದು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು, ನೆನ್ನೆ ಯಷ್ಟೇ ಖ್ಯಾತ ಆಟಗಾರ್ತಿ ಪಿ.ಟಿ ಉಷಾ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದು ಹೆಗ್ಗಡೆಯವರು ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!