• December 6, 2024

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರ್ಣಿ ಸಭೆ

 ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರ್ಣಿ ಸಭೆ

 

ಬೆಳ್ತಂಗಡಿ: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆಯು ಅ29ರಂದು ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು.

ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್,  ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಬೆಳ್ತಂಗಡಿ ಮಂಡಲ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ತಾಲೂಕಿನ ಎಲ್ಲಾ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ಪುಠಾಣಿ ಮಾಡಿದರು. ಮಂಡಲದ ಉಪಾಧ್ಯಕ್ಷ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ತಾಲೂಕು ಸಹಕಾರಿ ಭಾರತೀಯ ಅಧ್ಯಕ್ಷ ರಾಜೇಶ್ ಪೆರ್ಮುಡ ಧನ್ಯವಾದಗೈದರು.

Related post

Leave a Reply

Your email address will not be published. Required fields are marked *

error: Content is protected !!