ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡೋದು ಖಚಿತ: ಪ್ರಮೋದ್ ಮುತಾಲಿಕ್
ಧಾರವಾಡ: ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡೋದು ಖಚಿತ. ಆದರೆ ಬಿಜೆಪಿಯಿಂದಲ್ಲ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುವುದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.