15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು: ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜು.18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ಕಂಡಿದ್ದಾರೆ.
ಇಂದು ಬೆಳಿಗ್ಗೆ 11ಕ್ಕೆ ಸಂಸತ್ ಭವನದ 63 ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಪಿ ಸಿ ಮೋದಿ ಅವರು ಮತ ಎಣಿಕೆ ಪ್ರಕ್ರಿಯೆ ಮಾಡಿದ್ದರು.
ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ಗೆ ಸೋಲಾಗಿದ್ದು, ಇದೀಗ ದ್ರೌಪದಿ ಮುರ್ಮು ಹೊಸ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಮೊದಲ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ ಪಟ್ಟ ಎಂಬ ಬಿರುದು.
ದ್ರೌಪದಿ ಮುರ್ಮು ರಾಷ್ಟ್ರಪತಿಯಾದ ಸಂಭ್ರಮಕ್ಕೆ ಪ್ರಧಾನಿ ಮೋದಿ ಅವರ ಮನೆಗೆ ಭೇಟಿ ನೀಡಿ ಹೂ ಗುಚ್ಛವನ್ನು ನೀಡಿ ಅಭಿನಂದಿಸಿದರು. ಸಿಎಂ ಬೊಮ್ಮಾಯಿ ಕೂಡ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಈ ಸಂದರ್ಭ ಬಿಜೆಪಿಗರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.