• November 2, 2024

ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

 ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

 

ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನ.1 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಧರ್ಮಸ್ಥಳ ದೇವಳದ ಮುಖ್ಯ ಲೇಖಾಧಿಕಾರಿಯಾಗಿರುವ ಪುರಂದರ ಭಟ್ ಆಗಮಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಏಕೀಕರಣ ಕನ್ನಡ ನಾಡು ನುಡಿಯ ವೈಭವ ಕುರಿತು ವಿಸ್ತಾರವಾಗಿ ವಿವರಿಸಿದರು.

ಕನ್ನಡ ಕವಿಗಳ ಸಾಹಿತ್ಯವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡಿದರು.

ತದನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹಾಡು ನೃತ್ಯಗಳ ಮುಖಾಂತರ ಅನಾವರಣಗೊಳಿಸಿದರು. ಶಾಲಾ ಮುಖ್ಯ ಉಪಾಧ್ಯಾಯಿನಿ ಪರಿಮಳ ಎಂ ವಿ ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಕುಮಾರಿ ಮಹಿಮಾ ನಿರ್ವಹಿಸಿ , ಪ್ರಾಪ್ತಿ ಸ್ವಾಗತಿಸಿ, ಸ್ತುತಿ ಸರ್ವರನ್ನು ವಂದಿಸಿದರು. ಶಾಲಾ ಶಿಕ್ಷಕ ವೃಂದ ಹಾಗು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸಾಕ್ಷಿಗಳಾದರು.

Related post

Leave a Reply

Your email address will not be published. Required fields are marked *

error: Content is protected !!