• September 12, 2024

ತನ್ನ ಯ್ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಕರು ಕಡಿಮೆಯಾದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

 ತನ್ನ ಯ್ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಕರು ಕಡಿಮೆಯಾದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

ಹೈದರಾಬಾದ್: ಯೂಟ್ಯೂಬ್ ನಲ್ಲಿ ತನ್ನ ಚಾನೆಲ್ ಗೆ ವೀಕ್ಷಕರು ಕಡಿಮೆಯಾದರೂ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು 23 ವರ್ಷದ ವಿದ್ಯಾರ್ಥಿ ಒಬ್ಬ ತನ್ನ ಯ್ಯೂಟ್ಯೂಬ್ ಚಾನೆಲ್ ಗೆ ವೀಕ್ಷಕರು ಕಡಿಮೆಯಾದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೈದರಾಬಾದ್ ಐಐಟಿಎಂನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ವಾಲಿಯರ್ ಮೂಲದ ವಿದ್ಯಾರ್ಥಿ ಇಂದು ಬೆಳಿಗ್ಗೆ ವಸತಿ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿ ಬಿದ್ದ ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆ ದಾಖಲಿಸಿದರೂ ಕೂಡ ಆತ ಅಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ವಿದ್ಯಾರ್ಥಿಯು ಬರೆದಿರುವ ಸೂಸೈಡ್ ನೋಟ್ ನಲ್ಲಿ ಯೂಟ್ಯೂಬ್ ನಲ್ಲಿ ತನ್ನ ಚಾನೆಲ್ ಗೆ ವೀಕ್ಷಕರು ಕಡಿಮೆಯಾಗಿದ್ದಾರೆ ಮತ್ತು ಪೋಷಕರು ತನ್ನ ವೃತ್ತಿ ಜೀವನದಲ್ಲಿ ತನಗೆ ಮಾರ್ಗದರ್ಶನ ನೀಡುತ್ತಿಲ್ಲ ಎಂದು ಮೃತ ವಿದ್ಯಾರ್ಥಿ ನೋವು ತೂಡಿಕೊಂಡಿದ್ದಾನೆ.

Related post

Leave a Reply

Your email address will not be published. Required fields are marked *

error: Content is protected !!