ಮಿತ್ತಬಾಗಿಲು: ಅನಾರೋಗ್ಯದಿಂದ ಬಳಲುತ್ತಿದ್ದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ
ಮಿತ್ತಬಾಗಿಲು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ .
ಬೆಳ್ತಂಗಡಿ ತಾಲೂಕಿನ ಮಿತ್ತ ಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತ ದಿಡುಪೆ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಸಿಕೊಂಡಿದ್ದಾರೆ.