• November 2, 2024

ತಣ್ಣೀರುಪಂಥ :ಅಳಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

 ತಣ್ಣೀರುಪಂಥ :ಅಳಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

 

ತಣ್ಣೀರುಪಂಥ: ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು.

ಘಟನೆ ನಡೆದ ದಿನವೇ ರಾತ್ರಿ ಶಾಸಕರು ದೂರವಾಣಿ ಮೂಲಕ ಅಧಿಕಾರಿಗಳ ಸಂಪರ್ಕಿಸಿ ಕಂದಾಯ ಇಲಾಖೆಯಲ್ಲಿ ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿ,ತಮ್ಮಿಂದಾಗುವ ಸಹಾಯಹಸ್ತ ‌ನೀಡಿ ಮನೆಯವರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು,ಶಕ್ತಿ ‌ಕೇಂದ್ರ ಪ್ರಮುಖರಾದ ಮಹೇಶ್ ಜೆಂಕ್ಯಾರ್,ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕರಾದ ಚೇತನ್ ಸುವರ್ಣ ಅಳಕ್ಕೆ,ಹಾಗೂ ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!