ಹುಣ್ಸೆಕಟ್ಟೆ: ನ.13 ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಹುಣ್ಸೆಕಟ್ಟೆ: ಪದ್ಮವಿಭೂಷಣ ರಾಜರ್ಷಿ ಡಾ|ಡಿ ವೀರೇಂದ್ರ ಹೆಗ್ಗಡೆಯವರ ಕೃಷಾಶೀರ್ವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ , ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ ಶ್ರೀ ರಾಮ ಭಜನಾ ಮಂಡಳಿ (ರಿ) ಹುಣ್ಸೆಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನ.13 ರಂದು ಸಮುದಾಯ ಭವನ ಹುಣ್ಸೆಕಟ್ಟೆ ಯಲ್ಲಿ ಜರುಗಲಿದೆ.
ನ.13 ರಂದು ಬೆಳಿಗ್ಗೆ 9 ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಪ್ರಾರಂಭವಾಗಿ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಮಧ್ಯಾಹ್ನ 1 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.