• July 27, 2024

ಉಪ್ಪಿನಂಗಡಿ: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

 ಉಪ್ಪಿನಂಗಡಿ: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಉಪ್ಪಿನಂಗಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಹಳೇ ಟರಣ್ಯ ತಪಾಸಣಾ ಕೇಂದ್ರದ ಬಳಿ ನ.3ರಂದು ನಡೆದಿದೆ.

ಗಂಭೀರ ಗಾಯಗೊಂಡಿರುವ ಬೈಕ್ ಸವಾರ ಭರತ್ ಕುಮಾರ್(19) ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಪೆಟ್ರೋಲ್ ಪಂಪೊಂದರಲ್ಲಿ ಕಾರ್ಮಿಕನಾಗಿದ್ದಾನೆ. ಈತ ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. 

ಇನ್ನೂ ಬೈಕ್ ಬಸ್ಸಿನಡಿಗೆ ಬಿದ್ದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು , ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಈತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!