ಕೌಕ್ರಾಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೋ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಿದ ಯಾತ್ರಾರ್ಥಿಗಳಿಗೆ ಗಾಯ
ಕೌಕ್ರಾಡಿ: ಟೆಂಪವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನ.13 ರಂದು ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ನಡೆದಿದೆ.
ವಾಹನದಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯರು ಕೊಕ್ಕಡ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು ದೇವರ ದರ್ಶನ ಪಡೆದು ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಹೋದ ವೇಳೆ ಈ ಘಟನೆ ಸಂಭವಿಸಿದೆ.