• July 27, 2024

ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಬಂದಾರು ಗ್ರಾಮ ಪಂಚಾಯತು ಮಹಿಳೆಯರ ಖೋ ಖೋ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

 ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಬಂದಾರು ಗ್ರಾಮ ಪಂಚಾಯತು ಮಹಿಳೆಯರ ಖೋ ಖೋ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲುಕು ಪಂಚಾಯತ್ ಬೆಳ್ತಂಗಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ, ಶಾಲಾ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಗ್ರಾ.ಪಂ ನಾವೂರು ಹಾಗೂ ತಾಲೂಕಿನ ಎಲ್ಲಾ ಗ್ರಾ.ಪಂ ಗಳ ನೇತೃತ್ವದಲ್ಲಿ ನವೋದಯ ಯುವಕ ಮಂಡಲ( ರಿ) ನಾವೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ಸಹಭಾಗಿತ್ವದಲ್ಲಿ 2022-23 ನೇ ಸಾಲಿನ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ನ. 20 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರ ನಾವೂರಿನಲ್ಲಿ ಜರುಗಿತು.

ಈ ಕ್ರೀಡಾಕೂಟದಲ್ಲಿ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪಂಚಾಯತ್ ತಂಡ ಅದ್ಬುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!