• July 27, 2024

ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆಸಲ್ಲಿಸಿದ್ದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ

 ಧರ್ಮಸ್ಥಳ   ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆಸಲ್ಲಿಸಿದ್ದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ

ಖ್ಯಾತ ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಇಂದು( ನ.30) ರಂದು ಮುಂಜಾನೆ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುಂದರ್ ರಾವ್ ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಪ್ರಾಸಬದ್ಧ ಸಂಭಾಷಣೆಯಿಂದಲೆ ಹೆಸರುವಾಸಿಯಾಗಿದ್ದರು. ಯಕ್ಷಗಾನದ ತೆಂಕುತಿಟ್ಟು ಕಲಾವಿದರಾಗಿದ್ದ ಅವರು, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆ ಮಾಡಿದ್ದರು.

Related post

Leave a Reply

Your email address will not be published. Required fields are marked *

error: Content is protected !!