• November 13, 2024

ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಸಾವಿಗೆ ಹೊಸ ತಿರುವು

 ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಸಾವಿಗೆ ಹೊಸ ತಿರುವು

 

ಗುರುವಾಯನಕೆರೆ: ಶಿವಾಜಿನಗರ ನಿವಾಸಿ, ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಪ್ರವೀಣ್ ಪಿಂಟೋ ಅವರ ಪತ್ನಿ ತನಿಖೆ ನಡೆಸುವಂತೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರವೀಣ್ ಪಿಂಟೋ ಅವರು ನ.29 ರಂದು ರಾತ್ರಿ ಮನೆಯಿಂದ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದರು. ಮೆಹಂದಿ ಕಾರ್ಯಕ್ರಮದ ಮನೆಯಲ್ಲಿ ಪ್ರವೀಣ್ ಹಾಗೂ ಇನ್ನೋರ್ವ ವ್ಯಕ್ತಿಯ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದುಬಂದಿದೆ. ಮಾತ್ರವಲ್ಲದೆ ರಾತ್ರಿ ತಮ್ಮ. ಮನೆಯ ಸಮೀಪ ಕಾರೊಂದು ಬಂದು ಹೋಗಿದ್ದು ಮೃತ ದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟಿ ಶರ್ಟ್ ಇರಲಿಲ್ಲ ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ಕ್ರಮಕೈಗೊಳ್ಳುವಂತೆ ಮೃತನ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದ್ದು ಇದರಿಂದ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

Related post

Leave a Reply

Your email address will not be published. Required fields are marked *

error: Content is protected !!