ಉಪರಾಷ್ಟ್ರಪತಿಯವರನ್ನು ಭೇಟಿಯಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾಸದಸ್ಯರಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರು ಡಿ.9 ರಂದು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ ಕರ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಈ ವೇಳೆ ಧರ್ಮಸ್ಥಳದ ಪರವಾಗಿ ಉಪರಾಷ್ಟ್ರಪತಿಗೆ ಹೆಗ್ಗಡೆಯವರು ಗೌರವಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.