• October 22, 2024

ನಾಲ್ಕು ಚಕ್ರದ ವಾಹನ ಹೊಂದಿದ್ದೂ ಬಿಪಿಎಲ್ ಕಾರ್ಡ್ ಇದ್ದರೆ ಬೀಳುತ್ತೆ ದಂಡ

 ನಾಲ್ಕು ಚಕ್ರದ ವಾಹನ ಹೊಂದಿದ್ದೂ ಬಿಪಿಎಲ್ ಕಾರ್ಡ್ ಇದ್ದರೆ ಬೀಳುತ್ತೆ ದಂಡ

 

ನಾಲ್ಕು ಚಕ್ರ ವಾಹನ ಹೊಂದಿರುವ ರಾಜ್ಯದ ಪಡಿತರ ಚೀಟಿದಾರರಿಗೆ ದಂಡಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ನಾಲ್ಕು ಚಕ್ರದ ವಾಹನ ಹೊಂದಿದಂತಹ ಪಡಿತರ ಚೀಟಿ ದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಹಿಂದಿರುಗಿಸದ ಕಾರಣ ಇದೀಗ ಸರ್ಕಾರ ದಂಡದ ಅಸ್ತ್ರವನ್ನು ಪ್ರಯೋಗಿಸಿದೆ ಎನ್ನಲಾಗುತ್ತಿದೆ.

ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೊ ದಯಾ ,ಬಿಪಿಎಲ್ ಚೀಟಿ ಹೊಂದಿದ್ದರೆ 2019 ಸೆಪ್ಟೆಂಬರ್ 3ರೊಳಗೆ ವಾಪಸ್ ನೀಡುವಂತೆ ಸರಕಾರ ಸೂಚಿಸಿತ್ತು, ಆ ಬಳಿಕ ಅವಧಿಯನ್ನು ವಿಸ್ತರಣೆ ಕೂಡ ಮಾಡಲಾಗಿತ್ತು. ಆದರೂ ಯಾವುದೇ ನಾಲ್ಕು ಚಕ್ರ ಹೊಂದಿರುವ ಪಡಿತರ ಚೀಟಿದಾರರು ಕಾರ್ಡ್ ಸರೆಂಡರ್ ಮಾಡಿರಲಿಲ್ಲ ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ನಾಲ್ಕು ಚಕ್ರಗಳ ವಾಹನ ಹೊಂದಿರುವ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ನೋಟಿಸ್ ನೀಡಲಾಗುತ್ತಿದೆ.

ನೋಟಿಸ್ ತಲುಪಿದ ಮೂರು ದಿನಗಳ ಒಳಗೆ ಕಾರ್ಡ್ ದಾರರು ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಿ ದಂಡದ ಮೊತ್ತವನ್ನ ಪಾವತಿಸುವಂತೆ ಸೂಚಿಸಲಾಗಿದೆ. ದಂಡದ ಮೊತ್ತವನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೀಸಲಾಗಿದೆ. ಈ ದಂಡ ಕಟ್ಟಿದ ಬಳಿಕ ಬಿಪಿಎಲ್ ಕಾರ್ಡ್ ಅನ್ನು ಎಪಿಎಲ್ ಆಗಿ ಪರಿವರ್ತಿಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.

Related post

Leave a Reply

Your email address will not be published. Required fields are marked *

error: Content is protected !!