ಗಡಾಯಿಕಲ್ಲಿನಲ್ಲಿ ಅವ್ಯವಸ್ಥೆ : ಸ್ಥಳಕ್ಕೆ ದೌಡಾಯಿಸಿದ ಹಿರಿಯ ಅಧಿಕಾರಿಗಳು
ಬೆಳ್ತಂಗಡಿ: ಬೆಳ್ತಂಗಡಿಯ ಗಡಾಯಿಕಲ್ಲಿನಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪ್ರವಾಸಿಗರಿಗೆ ಟಿಕೆಟ್ ನೀಡದೆ ಹಣ ವಸೂಲಿ ಮಾಡುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು ಅಲ್ಲದೆ ಮಾಹಿತಿ ತಿಳಿದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಸ್ಥಳಕ್ಕಾಗಮಿಸಿ ಸ್ಥಳದಿಂದಲೇ ಕರೆ ಮಾಡಿ ಮೇಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.
ಬಳಿಕ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಆರ್ ಎಫ್ ಒ ಸ್ವಾತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರವಾಸಿಗರಿಂದ ಮಾಹಿತಿ ಪಡೆದು ಇಲ್ಲಿನ ಅವ್ಯವಹಾರ ಹಾಗೂ ಸುರಕ್ಷತೆಯ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಇದೀಗ ಹಿರಿಯ ಅಧಿಕಾರಿಗಳು ಅವ್ಯವಸ್ಥೆಯನ್ನು ಸರಿಪಡಿಸಿ ಖುದ್ದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಗಡಾಯಿಕಲ್ಲಿನಲ್ಲಿ ಮುಮದಿನ ದಿನಗಳಲ್ಲಿ ಯಾವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.