ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ 2022-23 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಉದ್ಘಾಟನಾ ಸಮಾರಂಭ ಡಿ.19 ರಂದು ಕಾಲೇಜು ಸಭಾಂಗಣದಲ್ಲಿ ಜರುಗಿತು.
ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ಬು ಸ.ಪ್ರ.ದ ಕಾಲೇಜು ಬೆಳ್ತಂಗಡಿ ಯ ಪ್ರಾಂಶುಪಾಲರು ಡಾ. ಸುಬ್ರಹ್ಮಣ್ಯ ಕೆ ವಹಿಸಿದ್ದರು.
ಕಾರ್ಯಕ್ರಮಕ್ಕೆ ಮುಖ್ಯಾತಿಥಿಗಳಾಗಿ ದ.ಕ.ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕುಮಾರಚಂದ್ರ ಕೆಎಸ್ ಪಿಎಸ್, ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜು ಪ್ರಾಂಶುಪಾಲರು ಡಾ.ಟಿ.ಕೆ ಶರತ್ ಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೋಧಕ ಹಾಗೂ ಆಡಳಿತ ಸಿಬ್ಬಂದಿಗಳು, ಕಾಲೇಜು ಅಭಿವೃದ್ಧಿ ಸಮಿತಿ , ಹಳೆ ವಿದ್ಯಾರ್ಥಿ ಸಂಘ,ಶಿಕ್ಷಕ ರಕ್ಷಕ ಸಂಘ ಮತ್ತು ವಿದ್ಯಾರ್ಥಿ ವೃಂದ ಭಾಗಿಯಾಗಿದ್ದರು