ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು: ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಬಿಂಬಿಸುವ ಪಾರ್ಟಿಗಳಿಗೆ ಬಜರಂಗದಳ ವಿರೋಧ: ರಾತ್ರಿ 11ರೊಳಗೆ ಮುಗಿಸುವಂತೆ ಬಜರಂಗದಳ ಪೊಲೀಸ್ ಕಮಿಷನರ್ ಗೆ ಮನವಿ
ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆಗಮಿಸುತ್ತಿದೆ. ಅದರಲ್ಲೂ ಪಬ್, ಕ್ಲಬ್, ಹೋಟ್‌ಲ್‌ಗಳಲ್ಲಿ ಹೊಸ ವರ್ಷಾಚರಣೆಯ ಪಾರ್ಟಿಗಳ ಆಯೋಜನೆ ಜೋರಾಗಿ ಯುಕವರು ನಡೆಸಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು ನೆಟ್ಟಿದೆ.
ಡಿಸೆಂಬರ್ 31ರಂದು ನಡೆಯುವ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಬಿಂಬಿಸುವ ಪಾರ್ಟಿಗಳಿಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಈಗಾಗಲೇ ಪಾರ್ಟಿಗಳನ್ನು ರಾತ್ರಿ 11ರೊಳಗೆ ಮುಗಿಸುವಂತೆ ಬಜರಂಗದಳ ಪೊಲೀಸ್ ಕಮಿಷನರ್ ಅವರಿಗೆ ಮನವಿ ಮಾಡಿದೆ. ಇಲ್ಲದಿದ್ದಲ್ಲಿ ಬಜರಂಗದಳದ ಕಾರ್ಯಕರ್ತರೇ ಪಾರ್ಟಿಗಳನ್ನು ಬಂದ್ ಮಾಡಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.
ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಮಾತನಾಡಿ, ಪಾರ್ಟಿ ನೆಪದಲ್ಲಿ ಹೋಟೆಲ್, ಪಬ್‌ಗಳಲ್ಲಿ ಲವ್ ಜಿಹಾದ್, ಡ್ರಗ್ಸ್ ಜಿಹಾದ್ ನಡೆಯುತ್ತಿದೆ. ಈ ಮೂಲಕ ದುಶ್ಚಟಗಳಿಗೆ ಪ್ರೇರಣೆ ನೀಡುವ ಘಟನೆಗಳು ನಡೆಯುತ್ತಿವೆ. ಇಸ್ಲಾಂ ಧರ್ಮವನ್ನು ಪಾಲಿಸುವ ಮುಸಲ್ಮಾನ ಯುವಕರು ಅವರ ಜಮಾಅತ್ ಅನ್ನು ಮಾತ್ರ ಒಪ್ಪುತ್ತಾರೆ. ಇಸ್ಲಾಂ ಪ್ರಕಾರ ಅವರಿಗೆ ಪಾರ್ಟಿಗಳು, ಸಂಗೀತ ನಿಷಿದ್ಧವರಿರುತ್ತದೆ. ಆದರೆ ಮಂಗಳೂರಿನ ಎಲ್ಲಾ ಪಬ್‌ಗಳಲ್ಲೂ ಯುವಕ, ಯುವತಿಯರು ಸಿಗುತ್ತಾರೆ. ಆದ್ದರಿಂದ ಎಲ್ಲಾ ಪಬ್, ಹೋಟೆಲ್ ಮಾಲೀಕರು ಯಾವುದೇ ಹೊಸ ವರ್ಷಾಚರಣೆಯ ಪಾರ್ಟಿಗಳಿಗೆ ಯುವಕ, ಯುವತಿಯರಿಗೆ ಅವಕಾಶ ನೀಡದಂತೆ ಆಗ್ರಹಿಸಿದರು.