ಬಿಎಂಟಿಸಿ ಹಾಗೂ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಉಲ್ಬಣವಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಬಿಎಂಟಿಸಿ ಹಾಗೂ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಈ ಮಹತ್ವದ ನಿರ್ಧಾರ ಇಂದಿನಿಂದ ( ಡಿಸೆಂಬರ್ 24) ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ಬಸ್ ಹತ್ತುವಂತಿಲ್ಲ. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದೆ.
ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ