• November 21, 2024

ಬೆಳ್ತಂಗಡಿ: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಪಕ್ಷ ಯಾರಿಗೆ ಮಣೆ ಹಾಕಲಿದೆ.!

 ಬೆಳ್ತಂಗಡಿ: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಪಕ್ಷ ಯಾರಿಗೆ ಮಣೆ ಹಾಕಲಿದೆ.!

 

ಬೆಳ್ತಂಗಡಿ (ಡಿ -24): ಮುಂಬರುವ ವಿಧಾನಸಭಾ ಕ್ಷೇತ್ರ ಚುನಾವಣೆಯ ಕಾವು ಎಲ್ಲೆಡೆಯೂ ಜೋರಾಗಿದ್ದು ಅದರಂತೆಯೇ ಎಲ್ಲಾ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಅದರಂತೆಯೇ ಎಸ್‌ಡಿಪಿಐ ಪಕ್ಷವೂ ಈಗಾಗಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಕಡೆಗಳಲ್ಲಿ ಕಾರ್ಯಕರ್ತರ ಸಭೆ ನಡೆದಿದ್ದು, ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಗ್ರಹ ಸ್ಥಳೀಯ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಬಂದು ಸ್ಫರ್ದಿಸುವ ಬಗ್ಗೆ ಈ ಹಿಂದೆಯೇ ತೀರ್ಮಾನವಾಗಿತ್ತು. ಈಗಾಗಲೇ ಕ್ಷೇತ್ರ ಸಮಿತಿ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಯುವ ನಾಯಕ ನವಾಝ್ ಶರೀಫ್ ಕಟ್ಟೆ ಪಕ್ಷದ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

       ಬೆಳ್ತಂಗಡಿ ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿಯಾಗಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಅಥವಾ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ಈ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಕೊಟ್ಟು ಕಣಕ್ಕಿಳಿಸುವುದೆಂದು ಜಿಲ್ಲಾ ಸಮಿತಿಯಲ್ಲಿ ಮತ್ತು ರಾಜ್ಯ ಸಮಿತಿಯಲ್ಲಿ ಅಂತಿಮವಾಗಿದೆ.

          ಅದಲ್ಲದೆ ಕೋವಿಡ್, ತಾಲೂಕಿಗೆ ನೆರೆ ಪ್ರವಾಹ ಸಂದರ್ಭದಲ್ಲಿ ಬೆಳ್ತಂಗಡಿ ಜನರ ಎಲ್ಲಾ ಅಗತ್ಯಗಳಿಗೆ ಕಾರ್ಯಕರ್ತರು ಸ್ಪಂದಿಸಿದ್ದು ಜನರ ಮನಸ್ಸಿಗೆ ಹತ್ತಿರವಾಗಿದ್ದರೆ.  

          

          ಎಸ್‌ಡಿಪಿಐ ಬೆಳ್ತಂಗಡಿ ಪಕ್ಷದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಆಯ್ಕೆ ಮೇಲೆ ನಿಂತಿದೆ. ಹಿರಿಯ ವ್ಯಕ್ತಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದಲ್ಲಿ ಅಕ್ಬರ್ ಬೆಳ್ತಂಗಡಿ ಸ್ಪರ್ಧೆ ಮಾಡಲಿದ್ದಾರೆ, ಕಿರಿಯ ವ್ಯಕ್ತಿ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಿಟ್ಟಿಸಿದರೆ ನವಾಝ್ ಕಟ್ಟೆ ಸ್ಪರ್ಧೆ ಮಾಡಲಿದ್ದಾರೆ ಎಂದು ಈಗಾಗಲೇ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ 
       ಅಂತಿಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಘೋಷಣೆ ಮಾಡುವ ಬಗ್ಗೆ ದಿನಾಂಕವನ್ನು ಈಗಾಗಲೇ ರಾಜ್ಯಾಧ್ಯಕ್ಷರು ಮಂಗಳೂರುನಲ್ಲಿ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣೆ ಭಾರಿ ಕುತೂಹಲ ಮೂಡಿದೆ.

Related post

Leave a Reply

Your email address will not be published. Required fields are marked *

error: Content is protected !!