• December 9, 2024

ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಿ- ರಕ್ಷಿತ್ ಶಿವರಾಂ

 ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಿ- ರಕ್ಷಿತ್ ಶಿವರಾಂ

 

ಬೆಳ್ತಂಗಡಿ: ಬೆಳ್ಳಾರೆ ಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು,
ಪ್ರವೀಣ್ ನೆಟ್ಟಾರು ರವರು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಇದ್ದರು , ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ ವಿಷಾದನೀಯ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ. ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕೆಂದು‌ ಒತ್ತಾಯಿಸುತ್ತೇನೆ. ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ.
ಕಾನೂನುಬದ್ಧ ತನಿಖೆಯಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!