• October 25, 2024

ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರ ಅಲರ್ಟ್: ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟ

 ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರ ಅಲರ್ಟ್: ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟ

 


ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟಿಸಿದೆ.

, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ ಮೊದಲು ಸ್ಯಾನಿಟೈಸ್ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮಾರ್ಗಸೂಚಿ:

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ.

ಬಾರ್, ಪಬ್, ಹೊಟೇಲ್ ಸಿಬ್ಬಂದಿ, ಗ್ರಾಹಕರು ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು.

ಗರ್ಭಿಣಿಯರಿಗೆ ಹೊಸ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರವೇಶ ಕಲ್ಪಿಸಲಾಗುವುದಿಲ್ಲ.

ಹೊಸ ವರ್ಷಾಚರಣೆಗೆ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಗಳಿಗೆ ತೆರಳುವಾಗ ಮಾಸ್ಕ್ ಧರಿಸಿಯೇ ಹೋಗಬೇಕು. ಅಲ್ಲಿನ ಸಿಬ್ಬಂದಿಗೆ ಈ ನಿಯಮ ಅನ್ವಯವಾಗುತ್ತದೆ.

ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧವಿಲ್ಲದಿದ್ದರೂ, ನಿಯಮ ಪಾಲನೆ ಅಗತ್ಯ

Related post

Leave a Reply

Your email address will not be published. Required fields are marked *

error: Content is protected !!