• September 21, 2024

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ವೇಳೆ ಪ್ಲಾಸ್ಟಿಕ್ ಧ್ವಜಗಳ ಮಾರಾಟ ತಡೆಗಟ್ಟುವಂತೆ ಹಿ.ಜ.ಸಮಿತಿಯಿಂದ ಮನವಿ

 ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ವೇಳೆ ಪ್ಲಾಸ್ಟಿಕ್ ಧ್ವಜಗಳ ಮಾರಾಟ ತಡೆಗಟ್ಟುವಂತೆ ಹಿ.ಜ.ಸಮಿತಿಯಿಂದ ಮನವಿ

ಬೆಳ್ತಂಗಡಿ: ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು, ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟುವ ಉದ್ದೇಶದಿಂದ ಬೆಳ್ತಂಗಡಿಯ ವಿವಿಧೆಡೆಗಳಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಜು.27 ರಂದು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ರಾದ ಪೃಥ್ವಿ ಸಾನಿಕಂ, ವೃತ್ತ ನಿರೀಕ್ಷಕರಾದ ಶಿವಕುಮಾರ್. ಬಿ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷ , ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಜೇಶ್ ಇವರಿಗೆ ಮನವಿ ನೀಡಲಾಯಿತು.

ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ.

ಹಾಗಾಗಿ ಸರಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪ್ರಕಾರ ಧ್ವಜವನ್ನು ಗೌರವಿಸದ ಜನರು, ಸಂಸ್ಥೆಗಳು ಮತ್ತು ಗುಂಪುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಉದಯ ಕುಮಾರ್ ಬಿ ಕೆ, ವಸಂತ ಮರಕ್ಕಡ, ರಾಜ ಕೇಸರಿ ಸಂಘಟನೆಯ ಅಮೃತ ಲಾಯಿಲ, ಸಾರ್ವಜನಿಕ ಶಾರದೋತ್ಸವದ ಕಾರ್ಯದರ್ಶಿಗಳಾದ ಮುರಳೀಧರ ಕೆಲ್ಲಗುತ್ತು, ಹಿಂದೂ ಜನಜಾಗೃತಿ ಸಮಿತಿಯ ರತ್ನಾಕರ ಆಚಾರ್ಯ, ಶಶಿಧರ್ ಪೆರಿಯಡ್ಕ , ದಾಮೋದರ ಪಟ್ರಮೆ ಮತ್ತಿತರರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!