• July 27, 2024

ಕನ್ಯಾಡಿ ರಾಮಮಂದಿರದ ಬಳಿ ಕಾರು-ಬೈಕ್ ಭೀಕರ ಅಪಘಾತ: ಬೈಕ್ ಸವಾರ ಗಂಭಿರ

 ಕನ್ಯಾಡಿ ರಾಮಮಂದಿರದ ಬಳಿ ಕಾರು-ಬೈಕ್ ಭೀಕರ ಅಪಘಾತ: ಬೈಕ್ ಸವಾರ ಗಂಭಿರ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಡಿ.30 ರಂದು ನಡೆದಿದೆ.

ಪರಿಣಾಮ ಬೈಕ್ ನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!