ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯುವ ಹೋರಾಟ ನನ್ನ ಗಮನಕ್ಕೂ ಬಂದಿಲ್ಲ, ಅದಕ್ಕೆ ಬೆಂಬಲವೂ ಇಲ್ಲ- ವಸಂತ ಬಂಗೇರ: ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಬೆಳ್ತಂಗಡಿ ಗುರುನಾರಾಯಣ ಸಭಾಭವನದಲ್ಲಿ ಜ.2 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯುವ ಹೋರಾಟ ನನ್ನ ಗಮನಕ್ಕೆ ಬಂದಿಲ್ಲ ಹಾಗೂ ಅದಕ್ಕೆ ಬೆಂಬಲ ಇಲ್ಲ ಎಂದು ಮಾಜಿ ಶಾಸಕ ವಸಂತ ಬಂಗೇರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯ ಸಂದರ್ಭ ಮಾಧ್ಯಮದವರು ಇವರಲ್ಲಿ ಸರ್ಕಾರದ ಹಾಗೂ ಬೆಳ್ತಂಗಡಿ ಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಜ.7 ರಂದು ಹಮ್ನಿಕೊಂಡಿರುವ ಬೃಹತ್ ಪ್ರತಿಭಟನೆಯ ಬಗ್ಗೆ ಪ್ರಶ್ನೆಮುಂದಿಟ್ಟಾಗ ಹೀಗೆ ಉತ್ತರಿಸಿದರು.
ವಿವಿಧ ವಿಚಾರಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥ ಜ.8 ರಂದು ಮುಙಡಾಜೆಯಿಂದ ಉಪ್ಪಿನಂಗಡಿಯವರೆಗೆ ಹಾಗೂ ಬೆಳ್ತಂಗಡಿ ಯಲ್ಲಿ ಹಕ್ಕೊತ್ತಾಯ ಸಭೆಯು ನಡೆಯಲಿದ್ದು ಈ ಬಗ್ಗೆ ತಾಲೂಕಿನಾದ್ಯಂತ ಪೂರ್ವಭಾವಿ ಸಭೆಗಳು ನಡೆಯುತ್ತಿದ್ದು, ಈ ಸಭೆಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆಯೇ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷಕ್ಕಾಗಲಿ ನನಗಾಗಲಿ ಯಾವುದೇ ಮಾಹಿತಿ ಇಲ್ಲ. ಜ.7 ರಂದು ನಡೆಯುವ ಪ್ರತಿಭಟನೆ ಪಕ್ಷದ ಅಧಿಕೃತ ಕಾರ್ಯಕ್ರಮವಾಗಿದ್ದು ಜ.8 ರಂದು ನಡೆಯುವ ಜಾಥ ಅವರ ವೈಯಕ್ತಿಕ ಕಾರ್ಯಕ್ರಮವಾಗಿರಬಹುದು ಆದ್ದರಿಂದ ಅದಕ್ಕೆ ಬೆಂಬಲ ಇಲ್ಲ ಎಂದು ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಶೈಲೇಶ್ ಕುಮಾರ್, ರಂಜನ್ ಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.