ಚಾರ್ಮಾಡಿ ಭಾಗದ ಜನರಿಗೆ ಬಸ್ ಸಂಚಾರದ ಕೊರತೆ: ಪರದಾಡುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು: ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರಿಂದ ಪ್ರತಿಭಟನೆ
ಚಾರ್ಮಾಡಿ ಭಾಗದ ಜನರಿಗೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರದ ಕೊರತೆಯಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ, ಕಚೇರಿಗಳಿಗೆ ತಲುಪಲು ಆಗುತ್ತಿಲ್ಲ. ಇದರಿಂದ ಬೇಸತ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇಂದು( ಜ.2) ರಂದು ಸೋಮಂತಡ್ಕದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಚಾರ್ಮಾಡಿ, ದಿಡುಪೆ ,ಕಾಯರ್ತಡ್ಕ ಭಾಗಗಳಲ್ಲಿ ಸ್ಥಳೀಯರಿಗೆ ಸಾರಿಗೆ ವಾಹನ ಟ್ರಿಪ್ ಕ್ಯಾನ್ಸಲ್ ಮಾಡುತ್ತಿರುವುದು ಕೆಎಸ್ ಆರ್ ಟಿಸಿ ಇಲಾಖೆಗೆ ಪ್ರತಿಭಟನೆಯ ಮೂಲಕ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ವಿಭಾಗದ ಮತ್ತು ಧರ್ಮಸ್ಥಳ ವಿಭಾಗದ ವೇಗಧೂತ ಬಸ್ ಗಳು ಸೋಮಂತಡ್ಕದಲ್ಲಿ ನಿಲ್ಲಿಸುವಂತೆ ಸಾರಿಗೆ ವಿಭಾಗದಿಂದ ಸೂಚನೆ ಇದ್ದರೂ ಸಹ ಬಸ್ ನಿಲ್ಲಿಸದೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ಪ್ರತಿಭಟನೆಯಲ್ಲಿ ಎಚ್ಚರಿಕೆ ನೀಡಿದ್ದಾರೆ