ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರನ್ನೊಳಗೊಂಡ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯು ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಜ.6 ರಂದು ಬೆಳ್ತಂಗಡಿ ಕಚೇರಿಯಲ್ಲಿ ನಡೆಯಿತು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಸ್ಪರ್ಧೆ ಖಚಿತ, ಅದಕ್ಕೆ ಬೇಕಾದ ರೂಪರೇಷಗಳ ಬಗ್ಗೆ ಚರ್ಚೆ ನಡೆಯಿತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಬಿಜೆಪಿಯನ್ನು ಈ ಬಾರಿ ತಿರಸ್ಕಾರ ಮಾಡಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಉಪಾಧ್ಯಕ್ಷರಾದ ಹನೀಫ್ ಪುಂಜಲಕಟ್ಟೆ, ಸಮಿತಿ ಸದಸ್ಯರಾದ ಇನಾಸ್ ರೊಡ್ರಿಗಸ್, ಕೋಶಾಧಿಕಾರಿ ಸಾಲಿ ಮದ್ದಡ್ಕ, ಜೊತೆ ಕಾರ್ಯದರ್ಶಿ ಅಶ್ರಫ್ ಕಟ್ಟೆ, ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕ್ಷೇತ್ರದ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.