• September 21, 2024

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿರವರಿಗೆ ಬೆಳ್ತಂಗಡಿ ನಗರದಲ್ಲಿ ಅದ್ದೂರಿ ಸ್ವಾಗತ

 ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿರವರಿಗೆ ಬೆಳ್ತಂಗಡಿ ನಗರದಲ್ಲಿ ಅದ್ದೂರಿ ಸ್ವಾಗತ

ಬೆಳ್ತಂಗಡಿ : ಬೆಂಗಳೂರುನಿಂದ ಆಗಮಿಸಿದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರಿಗೆ ಬೆಳ್ತಂಗಡಿಯಲ್ಲಿ ಜ.9 ರಂದು ಅದ್ದೂರಿ ಸ್ವಾಗತ ನಡೆಯಿತು.

ಪಕ್ಷದ ನಾಯಕರು, ಕಾರ್ಯಕರ್ತರು ಹೂವಿನ ಹಾರಗಳನ್ನು ಹಾಕಿ ಸ್ವಾಗತಿಸಿದರು. ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಕಾರ್ಯಕರ್ತರಿಂದ ಬೃಹತ್ ಮೆರವಣಿಗೆ ಮೂಲಕ ಜೈಕಾರ ಮೊಳಗಿತು. ರಸ್ತೆಯಿದ್ದಕ್ಕೂ ಸಾರ್ವಜನಿಕರಿಂದ ಹೂವಿನ ಹಾರ ಮತ್ತು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲ್, ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಗೌಸ್ ಮುನೀರ್ ಚಿಕ್ಕಮಗಳೂರು, ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಿತೈಷಿಗಳು, ಅಭಿಮಾನಿಗಳು, ಮತದಾರರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!