ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬೆಳ್ತಂಗಡಿ ಯುವಕನ ಮೇಲೆ ಹಲ್ಲೆ: ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಯುವಕನಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಬೆಳ್ತಂಗಡಿ ಯುವಕನ ಮೇಲೆ ಪುಂಡರ ತಂಡ ಬೆಂಗಳೂರಿನಲ್ಲಿ ದಾಳಿ ನಡೆಸಿದ್ದು, ವಿಷಯ ತಿಳಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆ ಮೆಟ್ಟಿಲೇರಿ ತನ್ನ ಕ್ಷೇತ್ರದ ಯುವಕನ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.
ಇದೀಗ ಈ ವಿಚಾರ ಎಲ್ಲಡೆ ವೈರಲ್ ಆಗುತ್ತಿದ್ದು ಸಮಾಜದ ನೋವುಗಳಿಗೆ ಕಷ್ಟಗಳಿಗೆ ಸ್ಪಂದಿಸುವವನೇ ನಿಜವಾದ ನಾಯಕ ಎಂದು ಶಾಸಕರ ಕರ‍್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.