• November 21, 2024

ಜ.23 -27 ರವರೆಗೆ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಶ್ರೀ ಮಹಾಗಣಪತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ

 ಜ.23 -27 ರವರೆಗೆ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಶ್ರೀ ಮಹಾಗಣಪತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ

 

ಬಂಗಾಡಿ: ಬೆಳ್ತಂಗಡಿ ತಾಲೂಕಿನ ಬಂಗಾಡಿಯಲ್ಲಿ ಬ್ರಹ್ಮಶ್ರೀ ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಶ್ರೀ ವರದರಾಜ ವಾಸುಕೀವನ ಬಂಟ್ವಾಳ ಇವರ ಉಪಸ್ಥಿತಿ ಯಲ್ಲಿ ಸ್ಥಾಪಿತಗೊಂಡಿರುವ ಸಹಸ್ರ ನಾಗಬನದ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ ಪವಿತ್ರ ಬ್ರಹ್ಮಕಲಶೋತ್ಸವ, ಹಾಗೂ ನಾಗಮಂಡಲೋತ್ಸವ ಕಾರ್ಯಕ್ರಮಗಳು ಜನವರಿ 23 ರಿಂದ ಜನವರಿ 27 ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಡಾ|| ಪ್ರದೀಪ್ ಎ ತಿಳಿಸಿದರು.

ಅವರು ಜ.21 ರಂದು ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶ್ರೀ ಅಷ್ಟಬಂಧ ನಾಗಬ್ರಹ್ಮಲಿಂಗೇಶ್ವರ ದೇವಾಲು ಸೇವಾ ಟ್ರಸ್ಟ್ ( ರಿ) ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ತಾಲೂಕು ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

ಜ.23 ರಂದು ವಿವಿಧ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ದೇವತಾ ಪ್ರಾರ್ಥನೆ, ವಾಸ್ತುಹೋಮ ನಡೆಯಲಿದ್ದು, ಪಾಕಶಾಲೆ ಉಗ್ರಾಣ, ಹಸಿರುವಾಣಿ ಹೊರೆಕಾಣಿಕೆ , ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಜರುಗಲಿದೆ.

ಜ.24 ರಂದು ಗಣಪತಿ ಹೋಮ, ಸರ್ಪತ್ರಯ ಮಂತ್ರಹೋಮ ಜರುಗಲಿದ್ದು, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ಶಾಸಕರು ಹರೀಶ್ ಪೂಂಜ, ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು, ಯಶೋಧರ ಬಲ್ಲಾಳ್ ಬಂಗಾಡಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡ ಹಾಗೂ ವಿವಿಧ ಗಣ್ಯರು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಬಂಗಾಡಿ ಅರಮನೆಯ ಶತಾಯುಷಿ ರವಿರಾಜ್ ಬಲ್ಲಾಳ್ ಇವರ ಅಭಿನಂದನಾ ಕಾರ್ಯಕ್ರಮ ಜರುಗಲಿದೆ.

ಜ.25 ರಂದು ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ಗಣ್ಯರ ಉಪಸ್ಥಿತಿ ಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ. ಜ.26 ರಂದು ಸಂಜೆ ಹಾಲಿಟ್ಟು ಸೇವೆ ಹಾಗೂ ನಂತರ ವೇದಮೂರ್ತಿ ಶ್ರೀ ರಾಮಚಂದ್ರ ಕುಂಜಿತ್ತಾಯರು ನಾಗಪಾತ್ರಿಗಳು ಮತ್ತು ಕೃಷ್ಣ ಪ್ರಸಾದ ಮುದ್ದೂರು ವೈದ್ಯ ಬಳಗದವರಿಂದ ನಾಗಮಂಡಲ ವೈಭವೋತ್ಸವ ನಡೆಯಲಿದೆ.

ಜ.27 ರಂದು ಬ್ರಹ್ಮಕಲಶಾಭಿಷೇಕ ಹಾಗೂ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಧರ್ಮಸ್ಥಳ, ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದ ಅಧ್ಯಕ್ಷರು ಪಿ ತಿಮ್ಮಪ್ಪ ಗೌಡ ಬೆಳಾಲು, ವಿ.ಹಿಂ.ಪ ಬೆಳ್ತಂಗಡಿ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಕೆ, ಚಂದ್ರಶೇಖರ್ ಗೌಡ, ಪ್ರಧಾನ ಗೌರವ ಅಧ್ಯಕ್ಷರು ಬಿ.ಯಶೋಧರ ಬಲ್ಲಾಳ್ , ಶ್ರೀಧರ್ ಗುಡಿಗಾರ್ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!