• November 22, 2024

ಡಿ.ಕೆ.ಆರ್. ಡಿ.ಎಸ್ (ರಿ) ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ

 ಡಿ.ಕೆ.ಆರ್. ಡಿ.ಎಸ್ (ರಿ) ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ

 

ಬೆಳ್ತಂಗಡಿ: ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ ಇವರ ಸಹಕಾರದೊಂದಿಗೆ ಗಂಡಿಬಾಗಿಲು ಸಂತ ತೋಮಸ್ ಪ್ರೌಢಶಾಲೆಯಲ್ಲಿ ‘ವಿಶ್ವ ಕ್ಯಾನ್ಸರ್ ದಿನಾಚರಣಾ’ ಕಾರ್ಯಕ್ರಮವು ಫೆ. 4 ರಂದು ನಡೆಯಿತು.

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶಿವಪದ್ಮಣ್ಣ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಕಾರ್ಯಕ್ರಮದ ಸಂಯೋಜಕರಾಗಿರುವ ಸುನಿಲ್ ಗೊನ್ಸಾಲ್ವಿಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಮೂಲಕ ನಡೆಸಲ್ಪಡುವ ಸ್ಪರ್ಶ- ಕ್ಯಾನ್ಸರ್ ರೋಗದ ವಿರುದ್ಧ ನಡೆಸುವ ಅಭಿಯಾನದ ಬಗ್ಗೆ ವಿವರಿಸಿದರು.

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರೋಜ ಕ್ಯಾನ್ಸರ್ ಜಾಗೃತಿಗಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂತ ತೋಮಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ತ್ರೇಸಿಯಾ ಕೆ.ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಜೋನ್ಸನ್ ರವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 120 ಮಂದಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು. ಕೇರಳ ಪಿಲತ್ತರದ ಸಂತ ಜೋಸೆಫ್ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related post

Leave a Reply

Your email address will not be published. Required fields are marked *

error: Content is protected !!