• July 27, 2024

ಶ್ರೀ. ಧ.ಮ.ಆ ಮಾಧ್ಯಮ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೆತ್ತವರಿಗೆ ಪರೀಕ್ಷಾ ಕಾರ್ಯಾಗಾರ

 ಶ್ರೀ. ಧ.ಮ.ಆ ಮಾಧ್ಯಮ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೆತ್ತವರಿಗೆ ಪರೀಕ್ಷಾ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನ ಮಾ.8 ರಂದು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರತಿಮಾ ಕೆ. ಎಂ.ಉಜಿರೆಯ ಸಂಪನ್ಮೂಲ ಅಧಿಕಾರಿ ಇವರು ದೀಪ ಪ್ರಜ್ವಾಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.. ತದನಂತರ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿ ಹೆತ್ತವರಿಗೆ ಹೊಸ ಶಿಕ್ಷಣ ನೀತಿಯ ಕುರಿತು ಹಾಗೂ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.

ನಂತರ ಪ್ರಶ್ನೋತ್ತರ ನಡೆದು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮಹಿಳಾ ದಿನಾಚರಣೆಯ ಕುರಿತು ಹಾಗೂ ಮಹಿಳೆಯ ಜವಾಬ್ದಾರಿಗಳು , ಮಹಿಳೆಯರ ಸಾಧನೆಗಳನ್ನು ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಉಜಿರೆ ಕ್ಲಸ್ಟರ್ ನ ಮಾನವ ಸಂಪನ್ಮೂಲ ಅಧಿಕಾರಿಯಾಗಿರುವ ಶ್ರೀಮತಿ ಪ್ರತಿಮಾ ಕೆಎಂ ಇವರನ್ನು ಮಹಿಳಾ ದಿನಾಚರಣೆಯ ಪರವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸನ್ಮಾನಿಸಲಾಯಿತು.

ಮಹಿಳೆಯ ಸಾಧನೆಯನ್ನು ಬಿಂಬಿಸುವ ರಂಗೋಲಿ ಶಾಲೆಯ ಪ್ರವೇಶ ದ್ವಾರದಲ್ಲಿ ರಾರಾಜಿಸುತ್ತಿತ್ತು. ಆಶಾ ಕುಮಾರಿ ಪಿ ಕಾರ್ಯಕ್ರಮವನ್ನು ನಡೆಸಿ ಸ್ವಾಗತಿಸಿದರು. ರೇಖಾ ವಂದಿಸಿದರು. ವಿದ್ಯಾರ್ಥಿ ಹೆತ್ತವರು ಹಾಗೂ ಶಿಕ್ಷಕ ವೃಂದ ಈ ಕಾರ್ಯಕ್ರಮದ ಸಾಕ್ಷಿಗಳಾದರು.

Related post

Leave a Reply

Your email address will not be published. Required fields are marked *

error: Content is protected !!