ಕನ್ಯಾಡಿ 2: 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ
ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ || ಇದರ ವತಿಯಿಂದ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಕನ್ಯಾಡಿ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಿರುವ ಕೆಲಸಗಳು ಹಾಗೂ ಕಾರ್ಯಕ್ರಮದ ಕುರಿತು ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಾಯಿತು.
9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.