ಹುಣ್ಸೆಕಟ್ಟೆ: ಶ್ರೀ .ಧ.ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ

ಹುಣ್ಸೆಕಟ್ಟೆ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ಹುಣ್ಸೆಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.
ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ವೀ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು.
ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.