ಒಂದು ವಾರದ ಮಟ್ಟಿಗೆ ದ.ಕ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಜಾರಿ: ಏನಿದು ರೂಲ್ಸ್?
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮವ ಜಾರಿಗೆ ಬಂದಿದೆ.
ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ. ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬಂದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.