ಅಜಾನ್ ಕುರಿತು ವಿವಾದಾತ್ಮಕ ಹೇಳಿಕೆ : ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಲ್ಲೇರಿಯಲ್ಲಿ SDPI ಪ್ರತಿಭಟನೆ.
ಬೆಳ್ತಂಗಡಿ: ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅಲ್ಲಾಹು ಕುರಿತು ಹಾಗೂ ಅಜಾನ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕಲ್ಲೇರಿಯಲ್ಲಿ ಮಾ. 17 ರಂದು ಪ್ರತಿಭಟನೆ ನಡೆಸಲಾಯಿತು.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಮಾತನಾಡಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಸ್ಲಿಮರ ಕುರಿತಾಗಿ ಪದೇ ಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಸಮಾಜದಲ್ಲಿ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಸಂಘಟನಾ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಸಮಿತಿ ಸದಸ್ಯರಾದ ಇನಾಸ್ ರೋಡ್ರಿಗಸ್, ತೆಕ್ಕಾರು ಪಂಚಾಯತ್ ಸದಸ್ಯರಾದ ಅನ್ವರ್ ತೆಕ್ಕಾರು, ಕುವೆಟ್ಟು ಪಂಚಾಯತ್ ಸದಸ್ಯರಾದ ಸಮೀರ್ ಎಸ್.ಕೆ, ಕುವೆಟ್ಟು ಬ್ಲಾಕ್ ಅಧ್ಯಕ್ಷರಾದ ಅಶ್ಫಾಕ್ ಪುಂಜಾಲಕಟ್ಟೆ, ರೌಫ್ ಪುಂಜಾಲಕಟ್ಟೆ, ಶುಕುರು ಕುಪ್ಪೆಟ್ಟಿ, ನಝೀರ್ ಬಾಜಾರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.