ಶ್ರವಣಬೆಳಗೊಳದ ಕರ್ಮಯೋಗಿ ಜಗದ್ಗುರು ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನಿಧನಕ್ಕೆ ಡಾ||ಡಿ ವೀರೇಂದ್ರ ಹೆಗ್ಗಡೆ ಸಂತಾಪ
ಧರ್ಮಸ್ಥಳ: ಶ್ರವಣಬೆಳಗೊಳದ ಪೀಠಾಧೀಶರಾಗಿ ದೀಕ್ಷೆ ಪಡೆದ ಬಳಿಕ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಯೊಂದಿಗೆ ಜನಮಂಗಳ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಅತಿಶಯಕ್ಷೇತ್ರ ಶ್ರವಣಬೆಳಗೊಳದ ಕರ್ಮಯೋಗಿ ಜಗದ್ಗುರು ಪೂಜ್ಯ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.