• September 13, 2024

ಬಂದಾರು: ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ

 ಬಂದಾರು: ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ

ಬಂದಾರು: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ವತಿಯಿಂದ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತಿನ ಗ್ರಂಥಾಲಯದ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನದಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ ಸಭಾಭವನದಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯ ಶಾಲಾ ಮಕ್ಕಳಿಗೆ ಚದುರಂಗ ಸ್ಪರ್ಧೆಯು ನಡೆಯಿತು.

ಗ್ರಾ.ಪಂ.ಅಧ್ಯಕ್ಷರಾದ ಪರಮೇಶ್ವರಿ ‌ಕೆ ಗೌಡ, ಪುಯಿಲ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಗ್ರಂಥಾಲಯ ಮೇಲ್ವಿಚಾರಕಿ ಸರೋಜಿನಿ,
ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಎಂ.ಬಿ.ಕೆ‌ ಶ್ರೀಮತಿ ಮೇಘನಾ, ಬಂದಾರು ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್,ಕುಂಟಾಲಪಲ್ಕೆ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ , ಸಹಶಿಕ್ಷಕರಾದ ವಿಶ್ವನಾಥ್,ಬೈಪಾಡಿ ಶಾಲಾ ಶಿಕ್ಷಕರು ತೀರ್ಪುಗಾರರು,ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!