• October 14, 2024

ಬೆಳ್ತಂಗಡಿ: ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್

 

ಬೆಳ್ತಂಗಡಿ:ವಿಧಾನ ಸಭೆಯ ಚುನಾವಣಾ ಪೂರ್ವದಲ್ಲಿ ರಾಜ್ಯ ಸರಕಾರವು ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ ಇತರ ಸಮುದಾಯಕ್ಕೆ ಹಂಚುವ ಪ್ರಯತ್ನ ಮಾಡುತ್ತಿದ್ದು ,ಸರಕಾರವು ತನ್ನ ವೋಟ್ ಬ್ಯಾಂಕ್ ಭದ್ರಪಡಿಸುವ ಕಾರ್ಯದಲ್ಲಿ ತೊಡಗಿರುವುದು ಅತ್ಯಂತ ಖಂಡನೀಯವೆಂದು ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿ ಅಭಿಪ್ರಾಯ ಪಟ್ಟಿದೆ.


ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಗೆ ಬದ್ಧರಾಗಿದ್ದರೆ ಸಬ್ ಕಾ ವಿಶ್ವಾಸವನ್ನು ಪಡೆದುಕೊಳ್ಳಬೇಕು,ಇದುವರೆಗೆ ಮುಸ್ಲಿಂ ಸಮುದಾಯ ಪಡೆಯುತ್ತಿದ್ದ ನಾಲ್ಕು ಶೇಖಡಾ ಮೀಸಲಾತಿಯನ್ನು ಬೇರೆ ಸಮುದಾಯಕ್ಕೆ ನೀಡಿ,ಸಮುದಾಯಗಳ ನಡುವೆ ವೈಮನಸ್ಸು ಸೃಷ್ಟಿಸುವ ,ಪರಸ್ಪರ ಎತ್ತಿ ಕಟ್ಟುವ ಪ್ರಯತ್ನ ಇದಾಗಿದೆ,ಸರಕಾರ ತನ್ನ ನಿರ್ಧಾರವನ್ನು ಮರು ಪರಿಶೀಲಿಸಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಎಸ್ ವೈ ಎಸ್ ರಾಜ್ಯ ಸಮಿತಿಯು ಸರಕಾರವನ್ನು ಆಗ್ರಹಿಸಿದೆ.

Related post

Leave a Reply

Your email address will not be published. Required fields are marked *

error: Content is protected !!