• September 12, 2024

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

 ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು , ಶಾಸಕರಾದ ಹರೀಶ್ ಪೂಂಜಾ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು, ಹೈವೆ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಮತ್ತು ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ಕೇಳಲಾಯಿತು. ಈ ವೇಳೆ ಬೇಡಿಕೆಗೆ ಉತ್ತಮ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಅಧ್ಯಕ್ಷರು, ಮತ್ತು ಸದಸ್ಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!