ಲಾಯಿಲ ಸ್ನೇಕ್ ಅಶೋಕ್ ಗೆ ನಾಗರಹಾವು ಕಡಿತ: ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಬೆಳ್ತಂಗಡಿ: ಪ್ರಸಿದ್ಧ ಹಾವು ರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳ ಗ್ರಾಮದಲ ಒಂದು ಮನೆಯಲ್ಲಿ ನಾಗರ ಹಾವು ಇರುವುದಾಗಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ತಿಳಿದು ತಕ್ಷಣ ಹೊರಟ ಅವರು ನಾಗರ ಹಾವನ್ನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ.
ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಿದ್ದಾರೆ ಸದ್ಯ ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ