ಶ್ರೀ ಕ್ಷೇತ್ರ ಕುದ್ರೋಳಿಗೆ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾದ ರಕ್ಷಿತ್ ಶಿವರಾಂ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥೇಶ್ವರ , ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾದ ರಕ್ಷಿತ್ ಶಿವರಾಂ:
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮಾಜಿ ಕೇಂದ್ರ ಸಚಿವರು ಶ್ರೀ ಬಿ.ಜನಾರ್ಧನ ಪೂಜಾರಿಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿಯಾಗಿ ಆರ್ಶಿವಾದ ಪಡೆದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.