ಬೆಳ್ತಂಗಡಿ: ಯುವತಿಯೊಂದಿಗೆ ಬಸ್ಸಿನಲ್ಲಿ ಮಾತನಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿತ: ಉಜಿರೆಯಲ್ಲಿ ನಡೆದ ಘಟನೆ
ಬೆಳ್ತಂಗಡಿ: ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಸ್ಲಿಂ ಹುಡುಗನೋರ್ವ ಬಸ್ಸಿನಲ್ಲಿ ಊರಿಗೆ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ವೇಳೆ ತಂಡವೊಂದು ಆತನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಎ.4 ರಂದು ವರದಿಯಾಗಿದೆ.
ಹಲ್ಲೆಗೊಳಗಾದ ಯುವಕ ಕಕ್ಕಿಂಜೆ ನಿವಾಸಿ ಸಾಹಿಲ್ ಎಂದು ಗುರುತಿಸಲಾಗಿದೆ.
ಆಕೆಯೊಂದಿಗೆ ಬಸ್ಸಿನಲ್ಲಿ ಆತ ಮಾತನಾಡುತ್ತಿದ್ದುದನ್ನು ನೋಡಿದ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಾಹಿಲ್ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.