ಧರ್ಮಸ್ಥಳ: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ:
ಧರ್ಮಸ್ಥಳ: ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಎನ್ನಲಾದ ದಿವಾಕರ್ ಕಲ್ಮಂಜ, ಯೋಗೀಶ್ ಕಲ್ಮಂಜ, ಗಂಗಾಧರ ಕಲ್ಮಂಜ, ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಎಂದು ವರದಿಯಾಗಿದೆ.
ಈ ವೇಳೆ ಕೆಪಿಸಿಸಿ ಸದಸ್ಯರಾದ ಕೇಶವ್ ಪಿ ಬೆಳಾಲು, ಧರ್ಮಸ್ಥಳ ಗ್ರಾ.ಪಂ ಸದಸ್ಯರಾದ ಹರೀಶ್ ಸುವರ್ಣ, ಧರ್ಮಸ್ಥಳ ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾದ ತುಕರಾಮ್ ಗೌಡ ಮತ್ತಿತರರು ಉಪಸ್ಥಿತರಿದ್ದರು.