• November 21, 2024

ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳಿದ್ದಾರೆಯೇ ಎಂದು ಪತ್ತೆ ಹಚ್ಚಬೇಕು ! ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ

 ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳಿದ್ದಾರೆಯೇ ಎಂದು ಪತ್ತೆ ಹಚ್ಚಬೇಕು ! ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ

 



ಮಂಗಳೂರು : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ರವಿಕುಮಾರ್ ಎಮ್. ಆರ್. ಇವರಿಗೆ ಏ.15 ರಂದು ಮನವಿಯನ್ನು ನೀಡಲಾಯಿತು.

ಈ ಸಂಧರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲ ಸಮನ್ವಯಕರಾದ ಸೌ. ಪವಿತ್ರಾ ಕುಡ್ವ, ವಿಶ್ವ ಹಿಂದೂ ಪರಿಷತ್ತಿನ ಶ್ರೀ ದಿನೇಶ್, ಹಿಂದೂ ಮಹಾಸಭಾದ ಶ್ರೀ ಲೋಕೇಶ್ ಉಳ್ಳಾಲ, ಉದ್ಯಮಿ ಶ್ರೀ ಭಾಸ್ಕರ್ ಕೋಲ್ನಾಡ್, ಧರ್ಮ ಪ್ರೇಮಿಗಳಾದ ಶ್ರೀ ಸುರೇಶ್ ಪಡುಕೋಣಾಜೆ, ಶ್ರೀ ಬಾಲಗಂಗಾಧರ್ ಕೋಡಿಕಲ್, ಶ್ರೀ ಶಶಿಧರ್ ಬಾಳಿಗ, ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಗಣೇಶ್ ಸಾಲಿಯನ್, ಶ್ರೀ ಉಮೇಶ್ ಆಚಾರ್ಯ ಮರಕಡ, ಶ್ರೀ ಸುಧಾಕರ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಸೌ. ಪವಿತ್ರಾ ಕುಡ್ವ ಮಾತನಾಡಿ, ಈ ದಾಳಿಯ ಹಿಂದೆ ಯಾರ ಕೈವಾಡವಿದೆ, ಎಂಬುವುದರ ಬಗ್ಗೆ ಕರ್ನಾಟಕ ಪೊಲೀಸರು ತನಿಖೆ ಮಾಡಿ ಈ ಪ್ರಕರಣದ ದಾಳಿಕೋರರು ಹಾಗೂ ಮಾಸ್ಟರ್ ಮೈಂಡ್ ಯಾರು ಎಂಬುವುದನ್ನು ಪತ್ತೆ ಹಚ್ಚಬೇಕೆಂದು ಆಗ್ರಹಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಹಿಂದೂ ಆರೋಪಿಗಳ ಪರವಾಗಿ ವಾದ ಮಾಡುವ ನ್ಯಾಯವಾದಿಗಳ ಮೇಲೆ ಆಕ್ರಮಣವಾಗುವುದು ಅತ್ಯಂತ ಗಂಭೀರ ಮತ್ತು ಅನುಮಾನಾಸ್ಪದವಾಗಿದೆ. ಗೌರಿ ಲಂಕೇಶ್ ಅವರು ನಕ್ಸಲೀಯರ ಸಂಪರ್ಕದಲ್ಲಿದ್ದರು ಎಂದು ಸ್ವತಃ ಅವರೇ ಹೇಳಿಕೊಂಡಿದ್ದರು. ಅವರ ಹತ್ಯೆಯ ನಂತರ ನಕ್ಸಲೀಯರೂ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ವಕೀಲರ ಮೇಲೆ ಒತ್ತಡ ಹೇರಲು ಈ ದಾಳಿ ನಡೆದಿದೆಯೇ ಎಂಬ ಶಂಕೆ ಮೂಡುತ್ತದೆ. ದಾಳಿಯಲ್ಲಿ ನ್ಯಾಯವಾದಿ ಕೃಷ್ಣಮೂರ್ತಿ ಇವರು ಬದುಕುಳಿದಿದ್ದರೂ ಅವರ ಮೇಲೆ ಮತ್ತೊಮ್ಮೆ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಾಗಾಗಿ ಅವರಿಗೆ ಸಶಸ್ತ್ರ ಪೊಲೀಸ್ ರಕ್ಷಣೆಯ ಅಗತ್ಯವಿದೆ. ಈ ಹೇಡಿತನದ ದಾಳಿಯ ಹಿಂದೆ ಪಿಎಫ್‌ಐದಂತಹ ಕಟ್ಟರ್ ವಾದಿ ಜಿಹಾದಿ ಸಂಘಟನೆ ಅಥವಾ ಗೌರಿ ಲಂಕೇಶ್ ಅವರನ್ನು ಬೆಂಬಲಿಸುವ ಅರ್ಬನ್ ನಕ್ಸಲಿಸ್ಟ್ ಗಳು ಇದ್ದಾರೆಯೇ ಎಂಬುದನ್ನು ತನಿಖೆ ಮಾಡುವುದು ಅನಿವಾರ್ಯವಾಗಿದೆ ಎಂದು ಸೌ. ಪವಿತ್ರ ಕುಡ್ವ ಹೇಳಿದರು.

Related post

Leave a Reply

Your email address will not be published. Required fields are marked *

error: Content is protected !!