• July 27, 2024

ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ:ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರ ನಡುವೆ ಸಂಘರ್ಷ ನಡೆದು ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿಯಾದ ಘಟನೆ ಇಂದು ನಡೆದಿದೆ.

ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ‌ ಚಕಮಕಿ ನಡೆದಿದೆ. ಉದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ‌ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.

Related post

Leave a Reply

Your email address will not be published. Required fields are marked *

error: Content is protected !!