ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಏ.18 ರಂದು ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಧರ್ಮಸ್ಥಳ ಭೇಟಿ ಬಳಿಕ ನೇರವಾಗಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದರು.
ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಭೇಟಿ ವೇಳೆ ದ.ಕ ಜೆಡಿಎಸ್.ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ , ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ಧರ್ಮರಾಜ್,ಯುವ ಜಿಲ್ಲಾ ಉಸ್ತುವಾರಿ ರತೀಶ್ ಕರ್ಕೇರಾ, ಹಿತೇಶ್ ರೈ , ಬೆಳ್ತಂಗಡಿ ತಾಲೂಕು ಜೆಡಿಎಸ್ ಅಧ್ಯಕ್ಷ ಶ್ರೀನಿವಾಸ್ ಗೌಡ ಜೊತೆಯಲ್ಲಿದ್ದರು.