• July 15, 2024

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ದ.ಕ, ಉಡುಪಿ ಯಲ್ಲಿಂದು ಬಿಜೆಪಿ, ಕಾಂಗ್ರೆಸ್, ಎಸ್ ಡಿ ಪಿಐ, ಇನ್ನಿತರ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮಾಜಿ ಸಚಿವ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕ್ಕೆ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು ನಗರ ಉತ್ತರ ಕ್ಷೇತ್ರದ ಹಾಲಿ ಶಾಸಕ ಡಾ ಭರತ್ ಶೆಟ್ಟಿ ಮಂಗಳೂರು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ

ಕಾರ್ಕಳ:

ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದು ಮುತಾಲಿಕ್ ತಾಲೂಕು ಕಚೇರಿ ಚುನಾವಣಾ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಸುಳ್ಯ: ಮೀಸಲಾತಿ ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಸಹುಸ್ತುವಾರಿ ಕೆ ಅಣ್ಣಮಲಯ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!