ಕುವೆಟ್ಟು: ಆಟಿಡೊಂಜಿ ಕೂಟ ಕಾರ್ಯಕ್ರಮ: ಭಾಗಿಯಾದ ವಿವಿಧ ಗಣ್ಯರು
ಕುವೆಟ್ಟು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಇವರ ಆಶ್ರಯದಲ್ಲಿ ನಡೆದ ಆಟಿಡೊಂಜಿ ಕೂಟ” ಕಾರ್ಯಕ್ರಮದಲ್ಲಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ , ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ನಿತೇಶ್ ಎಚ್ ಕೊಟ್ಯಾನ್, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಇದರ ಅಧ್ಯಕ್ಷರಾದ ಚಂದ್ರಶೇಖರ್ ಕೊಟ್ಯಾನ್ ,
ಕುವೆಟ್ಟು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಅನೂಪ್ ಬಂಗೇರ,ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಜಯಂತಿ ಜಾಲಿರಡ್ಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.